ಯೆಶಾಯ 52:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು. ಅಧ್ಯಾಯವನ್ನು ನೋಡಿ |