Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:9
24 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.


ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.


“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು