Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:12
38 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು