Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾಡಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:9
11 ತಿಳಿವುಗಳ ಹೋಲಿಕೆ  

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು