ಯೆಶಾಯ 54:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |