ಯೆಶಾಯ 54:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು. ಅಧ್ಯಾಯವನ್ನು ನೋಡಿ |