Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:7
34 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.


ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.


“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.


ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.


ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು