Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:9
18 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು