Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:13
34 ತಿಳಿವುಗಳ ಹೋಲಿಕೆ  

ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.


“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.


ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.


ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.


ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.


“ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.


“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು