Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:2
42 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.


ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.


ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.


ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು