ಯೆಶಾಯ 55:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.