Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:10
24 ತಿಳಿವುಗಳ ಹೋಲಿಕೆ  

ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು