Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:11
36 ತಿಳಿವುಗಳ ಹೋಲಿಕೆ  

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು