ಯೆಶಾಯ 56:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.” ಅಧ್ಯಾಯವನ್ನು ನೋಡಿ |