ಯೆಶಾಯ 57:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |