Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:20
13 ತಿಳಿವುಗಳ ಹೋಲಿಕೆ  

ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು