ಯೆಶಾಯ 57:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ? ಅಧ್ಯಾಯವನ್ನು ನೋಡಿ |