Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:6
13 ತಿಳಿವುಗಳ ಹೋಲಿಕೆ  

ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು