Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:11
35 ತಿಳಿವುಗಳ ಹೋಲಿಕೆ  

ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.


ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.


“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು