ಯೆಶಾಯ 58:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು. ಅಧ್ಯಾಯವನ್ನು ನೋಡಿ |