ಯೆಶಾಯ 58:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ? ಅಧ್ಯಾಯವನ್ನು ನೋಡಿ |
ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.