ಯೆಶಾಯ 58:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು. ಅಧ್ಯಾಯವನ್ನು ನೋಡಿ |