ಯೆಶಾಯ 59:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು. ಅಧ್ಯಾಯವನ್ನು ನೋಡಿ |