ಯೆಶಾಯ 59:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ. ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.