ಯೆಶಾಯ 59:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು. ಅಧ್ಯಾಯವನ್ನು ನೋಡಿ |