Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:18
37 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು