Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:19
25 ತಿಳಿವುಗಳ ಹೋಲಿಕೆ  

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;


ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.


ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.


ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು