Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಉಜ್ಜೀಯನು ಕಾಲವಾದ ವರುಷದಲ್ಲಿ ಕರ್ತನು ಉನ್ನತೋನ್ನತ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:1
38 ತಿಳಿವುಗಳ ಹೋಲಿಕೆ  

ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.


ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.


“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.


ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.


ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.


ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.


ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.


ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು