ಯೆಶಾಯ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.