Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:9
21 ತಿಳಿವುಗಳ ಹೋಲಿಕೆ  

ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.


ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.


ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು