Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:13
13 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


“ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”


ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.


ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು