ಯೆಶಾಯ 60:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು. ಅಧ್ಯಾಯವನ್ನು ನೋಡಿ |