Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:2
35 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.


ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.


ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.


ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.


ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು