ಯೆಶಾಯ 60:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು. ಅಧ್ಯಾಯವನ್ನು ನೋಡಿ |