ಯೆಶಾಯ 61:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು. ಅಧ್ಯಾಯವನ್ನು ನೋಡಿ |