Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:7
19 ತಿಳಿವುಗಳ ಹೋಲಿಕೆ  

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.


ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು