Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:8
34 ತಿಳಿವುಗಳ ಹೋಲಿಕೆ  

ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.


ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು