ಯೆಶಾಯ 61:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿ |