ಯೆಶಾಯ 62:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ. ಅಧ್ಯಾಯವನ್ನು ನೋಡಿ |