Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:10
27 ತಿಳಿವುಗಳ ಹೋಲಿಕೆ  

“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”


ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.


ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.


ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.


ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.


ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು