ಯೆಶಾಯ 62:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ” ಅಧ್ಯಾಯವನ್ನು ನೋಡಿ |