ಯೆಶಾಯ 62:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು. ಅಧ್ಯಾಯವನ್ನು ನೋಡಿ |