ಯೆಶಾಯ 62:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು. ಅಧ್ಯಾಯವನ್ನು ನೋಡಿ |