ಯೆಶಾಯ 62:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.