ಯೆಶಾಯ 62:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿ |