ಯೆಶಾಯ 63:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.” ಅಧ್ಯಾಯವನ್ನು ನೋಡಿ |