Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:11
34 ತಿಳಿವುಗಳ ಹೋಲಿಕೆ  

ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.


ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;


ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.


ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು