Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:12
23 ತಿಳಿವುಗಳ ಹೋಲಿಕೆ  

ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.


ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.


ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,


ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.


ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.


ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು