Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:16
29 ತಿಳಿವುಗಳ ಹೋಲಿಕೆ  

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು