ಯೆಶಾಯ 63:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ. ಅಧ್ಯಾಯವನ್ನು ನೋಡಿ |